alex Certify JOB ALERT : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ನಂತರ ಮಾತನಾಡಿದರು.

ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ ಟೇಬಲ್ ಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದರೆ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೊಗ ಸೃಷ್ಟಿ ಹೆಚ್ಚಾಗಿ ಅಭಿವೃದ್ದಿ ವೇಗ ಪಡೆದುಕೊಳ್ಳುತ್ತದೆ. ಜನರ ಆದಾಯ ಕೂಡ ಹೆಚ್ಚಾಗುತ್ತದೆ ಎಂದರು .

ಹೊಸದಾಗಿ ಸಂಚಾರ ಠಾಣೆ ಗಳನ್ನು ಆರಂಭಿಸಿದ್ದೇವೆ. ಹೊಸ ವಾಹನಗಳ ಖರೀದಿಗೆ 100 ಕೋಟಿ ರು. ಅನುದಾನ ನೀಡಲಾಗಿದೆ. 2125 ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಲು 450 ಕೋಟಿನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರು. ಒದಗಿಸಲಾಗಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...