ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯರ ವೇತನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ದೊರೆತಿದೆ. ಇದರ ಜೊತೆಗೆ ಪ್ರಸೂತಿ ಮತ್ತು ತಜ್ಞ ವೈದ್ಯರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಂಡಿದ್ದೇವೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.