alex Certify BIG NEWS : ಮಲೆನಾಡಿನಲ್ಲಿ ಮಂಗನಕಾಯಿಲೆ , ಡೆಂಗ್ಯೂ, ಚಿಕುನ್ ಗುನ್ಯಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಲೆನಾಡಿನಲ್ಲಿ ಮಂಗನಕಾಯಿಲೆ , ಡೆಂಗ್ಯೂ, ಚಿಕುನ್ ಗುನ್ಯಾ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕ್ರಮ

ಶಿವಮೊಗ್ಗ : ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ  ಸುರಕ್ಷತಾ ಕ್ರಮಗಳನ್ನುಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯ ಇಂದಿನ ಸ್ಥಿತಿಗತಿ ಹಾಗೂ ಕೈಗೊಳ್ಳಬಹುದಾದ ನಿಯಂತ್ರನ ಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ವೈದ್ಯಾಧಿಕಾರಿಗಳೊಂದಿಗಿನ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯ ಯಾವುದೇ ತಾಲೂಕುಗಳ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ನಿವಾಸಿಗಳು ಯಾವುದೇ ಜ್ವರ ಬಂದಲ್ಲಿ ತಕ್ಷಣದ ಕ್ರಮವಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ, ತಪಾಸಣೆ ಮಾಡಿಸಿ, ಚಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಈ ಸದವಕಾಶದ ಲಾಭ ಪಡೆದುಕೊಳ್ಳಬೇಕಲ್ಲದೇ ಆರೋಗ್ಯ ಇಲಾಖೆಯು ಸೂಚಿಸುವ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಅವರು ಸಲಹೆ ನೀಡಿದರು.

ಈಗಾಗಲೇ ಡೇಂಗ್ಯೂ ಜ್ವರದ ತಪಾಸಣೆಗಾಗಿ ಪ್ರಸಕ್ತ ಮಾಹೆಯಲ್ಲಿ ಈಗಾಗಲೇ ಶಂಕಿತ 390ಜನರ ರಕ್ತಪರೀಕ್ಷೆ ನಡೆಸಿ, ಅವರಲ್ಲಿ ಬಾಧಿತ 28ಜನರನ್ನು ಗುರುತಿಸಿ, ಸಕಾಲಿಕ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಪರೀಕ್ಷೆ ನಡೆಸಿದ 223 ಮಂದಿಯಲ್ಲಿ 23ಮಂದಿ ಚಿಕನ್ಗುನ್ಯ ಸೋಂಕಿಗೆ ತುತ್ತಾಗಿರುವುದು ಪತ್ತೆ ಮಾಡಲಾಗಿದ್ದು ಸಕಾಲಿಕವಾಗಿ ಚಿಕಿತ್ಸೆ ನೀಡಲಾಗಿದೆ ಎಂದರು.

ಸಾರ್ವಜನಿಕರು ತಾವು ವಾಸಿಸುವ ಸುತ್ತಮುತ್ತಲ ಪ್ರದೇಶದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಲಾರ್ವಾಗಳನ್ನು ನಾಶಪಡಿಸಲು ಗಮನಹರಿಸಬೇಕು. ವಿಶೇಷವಾಗಿ ನಿರ್ಮಾಣಕಾರ್ಯ, ಪ್ರಗತಿಯಲ್ಲಿರುವ ನಿವೇಶನಗಳು, ಪಾಳುಬಿದ್ದ ನಿರ್ಮಾಣಗಳ ನಿವೇಶನಗಳು, ಖಾಲಿ ನಿವೇಶನಗಳು, ಬಯಲು ಜಮೀನು ಮುಂತಾದವುಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳುವಂತೆ ಅವರು ಸೂಚಿಸಿದ ಅವರು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಡೇಂಗ್ಯೂ ತಪಾಸಣೆಯನ್ನು ಹೆಚ್ಚಿಸಲು ಗಮಹರಿಸಬೇಕು.ಸೋಂಕಿತರು, ಶಂಕಿತರು ಚಿಕಿತ್ಸಾಲಯಕ್ಕೆ ಬಂದಲ್ಲಿ ಯಾವುದೇ ರೋಗಿಯನ್ನು ನಿರ್ಲಕ್ಷಿಸದೇ ಸಕಾಲಿಕ ಚಿಕಿತ್ಸೆ ನೀಡಿ ಅಮೂಲ್ಯ ಜೀವ ರಕ್ಷಣೆಗೆ ಮುಂದಾಗಬೇಕು. ಅಲ್ಲದೇ ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕಾಲಕಾಲಿಕವಾಗಿ ಲಾರ್ವಾ ಸಮೀಕ್ಷೆ ನಡೆಸಬೇಕು. ಅಗತ್ಯವಿದ್ದಲ್ಲಿ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದುಕೊಳ್ಳಬೇಕು ಎಂದ ಅವರು, ಡೇಂಗ್ಯೂ ನಿಯಂತ್ರಣ ಕಾರ್ಯಕ್ರಮಗಳು ನಿರಂತರವಾಗಿರುವಂತೆ ಆರೋಗ್ಯಾಧಿಕಾರಿಗಳು ನೋಡಿಕೊಳ್ಳುವಂತೆ ಅವರು ಸೂಚಿಸಿದರು.

• ಜಿಲ್ಲೆಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಡೇಂಗ್ಯೂ ಬಾದಿತರು ದಾಖಲಾದಲ್ಲಿ ಅವರ ಬಗ್ಗೆ ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿ. ಇದರಿಂದಾಗಿ ಕಾಯಿಲೆಯ ನಿಯಂತ್ರಣಕ್ಕೆ ಸಕಾಲಿಕ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. – ಡಾ|| ಗುಡುದಪ್ಪ ಕುಸುಬಿ., ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿಗಳು, ಶಿವಮೊಗ್ಗ.

ಮಂಗನಕಾಯಿಲೆ ನಿಯಂತ್ರಣ ಕ್ರಮ 

ಈಗಾಗಲೇ ಮಂಗನಕಾಯಿಲೆ ಕಂಡುಬಂದ ತಾಲೂಕಗಳ ಆಯ್ದ ಪ್ರದೇಶಗಳಲ್ಲಿ ಆಯಾ ತಾಲೂಕು ವೈದ್ಯಾಧಿಕಾರಿಗಳು ಕಾಯಿಲೆ ಹರಡದಂತೆ ತಕ್ಷಣದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದ ಅವರು, ಅದರ ನಿಯಂತ್ರಣ ಕ್ರಮವಾಗಿ ಸ್ಥಳೀಯ ನಿವಾಸಿಗಳಿಗೆ ಔ಼ಷಧಗಳನ್ನು ವಿತರಿಸಿ, ಬಳಸಲು ಸೂಚಿಸಿದರು.

ಮಂಗನ ಕಾಯಿಲೆಯನ್ನು ಸಕಾಲದಲ್ಲಿ ಪತ್ತೆಹಚ್ಚಿ ಕ್ರಮ ವಹಿಸಲು ಮಂಗಳ ಸಾವಿನ ಪ್ರಕರಣಗಳನ್ನು ಗುರುತಿಸಿ, ಪರೀಕ್ಷೆಗೊಳಪಡಿಸಬೇಕು. ಇದರಿಂದಾಗಿ ಸಕಾಲಿಕ ನಿಯಂತ್ರಣ ಕ್ರಮ ಸಾಧ್ಯವಾಗಲಿದೆ. ಅರಣ್ಯ ರಕ್ಷಕರು ತಮ್ಮ ಕರ್ತವ್ಯದ ಅವಧಿಯಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಸ್ಥಳೀಯ ಗ್ರಾಮಪಂಚಾಯಿತಿಗಳ ಆಡಳಿತಾಧಿಕಾರಿಗಳು ಮಂಗಗಳು ಮರಣಹೊಂದಿದ ಸ್ಥಳದಲ್ಲಿ ಸಾರ್ವಜನಿಕರು ಸಂಚರಿಸದಂತೆ ಸೂಚನಾಫಲಕಗಳನ್ನು ಅಳವಡಿಸುವಂತೆ ಹಾಗೂ ಸಕ್ರಿಯ ಉಣುಗಗಳು ಇರುವ ಸಾಧ್ಯತೆಯ ಬಗ್ಗೆ ಪ್ರಕಟಿಸುವಂತೆ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳಿಗೆ ಒಳಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಸಕಾಲಿಕ ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸುಸಜ್ಜಿತವಾಗಿ 10ಹಾಸಿಗೆಗಳನ್ನು ಕಾಯ್ದಿರಸಲಾಗಿದೆ. ಡಾ|| ನಾಗರಾಜನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು.

ಕೃಷಿ ಮತ್ತು ತೋಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರೈತರು ತಮ್ಮ ಜಮೀನುಗಳ ಸಮೀಪದಲ್ಲಿ ಮಂಗಗಳ ಸಾವು ಕಂಡುಬಂದಲ್ಲಿ ಯಾವುದೇ ನಿರ್ಲಕ್ಷ್ಯ ತೋರದೇ ತಕ್ಷಣವೇ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಮಾಹಿತಿ ನೀಡಿ. ಅಲ್ಲದೇ ಗ್ರಾಮಸ್ಥರು ಸತ್ತ ಮಂಗಗಳ ವಿಲೇವಾರಿಗೆ ಮುಂದಾಗದಂತೆಯೂ ಸೂಚಿಸಿದರು ಅಲ್ಲದೇ ಈ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ಸಹಾಯವಾಣಿಯನ್ನು ಸ್ಥಾಪಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲೆಯ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಮಂಗನಕಾಯಿಲೆಯ ನಿಯಂತ್ರಣ ಕುರಿತು ಮಾಹಿತಿಫಲಕ ಅಳವಡಿಸಬೇಕು. ಅಲ್ಲದೇ ಒಂದೆರೆಡು ದಿನದಲ್ಲಿ ಜ್ವರಬಂದಲ್ಲಿ ತಕ್ಷಣ ರಕ್ತಪರೀಕ್ಷೆ ಮಾಡಿಸಿಕೊಳ್ಳುವಂತೆಯೂ ಅವರು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್, ಡಾ|| ಸಿದ್ಧನಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...