ಬೆಂಗಳೂರು : 545 ಪಿಎಸ್ಐ ಹುದ್ದೆಗಳು ಸೇರಿದಂತೆ ಒಂದು ಸಾವಿರ ಪಿಎಸ್ಐ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ 545 ಪಿಎಸ್ಐ ಹುದ್ದೆಗಳನ್ನು ಕೆಇಎ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ನಂತರ ಹಂತ ಹಂತವಾಗಿ 1 ಸಾವಿರ ಪಿಎಸ್ಐ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
545 ಪಿಎಸ್ಐ ಹುದ್ದೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿತ್ತು.
545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ, ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿತ್ತು. ಈ ಮೂಲಕ ಎಲ್ಲಾ ಅಭ್ಯರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಬೇಕಾಗುತ್ತದೆ.