ಬೆಂಗಳೂರು : ಶೀಘ್ರವೇ ಆಹಾರ ಇಲಾಖೆಯಲ್ಲಿ ಖಾಲಿ ಇರುವ 2,181 ಹುದ್ದೆಗಳಿಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವರು ಆಹಾರ ಇಲಾಖೆಯಲ್ಲಿ ಖಾಲಿ ಇರುವ 2,181 ಹುದ್ದೆಗಳಿಗೆ ಭರ್ತಿಗೆ ಶೀಘ್ರ ಕ್ರಮ ವಹಿಸಲಾಗುತ್ತದೆ. ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಿದ್ದೇವೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಅದೇ ರೀತಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಸದ್ಯಕ್ಕೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ, ಕಾರಣಏನೆಂಬುದನ್ನು ಸದ್ಯದಲ್ಲೇ ಹೇಳುತ್ತೇನೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ
ಸದ್ಯ, ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದ್ದು, ಹಲವಡೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿದಾರರು ಪರದಾಡುವಂತಾಗಿದೆ.
ಇಂದು ಮಧ್ಯಾಹ್ನ 12 ಗಂಟೆಯಿಂದ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, http://ahara.kar.nic.in ವೆಬ್ ಸೈಟ್ ಓಪನ್ ಆದ ಬಳಿಕ ಹಲವಡೆ ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ತಾಂತ್ರಿಕ ಕಾರಣದಿಂದ ಸರ್ವರ್ ಡೌನ್ ಆಗಿದ್ದು, ಪಡಿತರ ಚೀಟಿದಾರರಿಗೆ ಭಾರೀ ಸಮಸ್ಯೆಯಾಗಿದೆ.
ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಗ್ರಾಮಾ ಒನ್ ಸೇವಾ ಕೇಂದ್ರಗಳಿಗೆ ಹೋದ ಪಡಿತರ ಚೀಟಿದಾರರು ಹೆಸರು ಸೇರ್ಪಡೆ ಮಾಡಲು ಪರದಾಡುವಂತಾಗಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಸರ್ವರ್ ಸಮಸ್ಯೆ ಕಾಡುತ್ತಿದೆ ಎನ್ನಲಾಗಿದೆ.