ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಇಂದು ಕಲಾಪದಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಪ್ರತಿ ಜಿಲ್ಲೆಗಳಲ್ಲೂ ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಸರ್ಕಾರದ ನೀತಿಗೆ ಅನುಗುಣವಾಗಿ 24 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಹಣಕಾಸು ಸ್ಥಿತಿಗತಿ ನೋಡಿಕೊಂಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಸಚಿವರು ಹೇಳಿದರು.