ಬೆಂಗಳೂರು : ಪಾಕ್ ಪರ ಘೋಷಣೆ ಕೂಗಿದು ಸಾಬೀತಾದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಪಾಕ್ ಪರ ಘೋಷಣೆ ಕೂಗಿದು ಸಾಬೀತಾದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಶಂಕಿತರ ಸುಳಿವು ಸಿಕ್ಕಿದೆ, ಸದ್ಯದಲ್ಲೇ ಆರೋಪಿಯನ್ನು ಬಂಧಿಸಲಾಗುತ್ತದೆ ಎಂದು ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ನಡೆದ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.