ನವದೆಹಲಿ : ಓಮಿಕ್ರಾನ್ ವೇಗವಾಗಿ ಹಬ್ಬುವ ಮೊದಲೇ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ವಾರ್ ರೂಮ್ ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ರೂಪಾಂತರಿ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯಗಳಿಗೆ ಕೇಂದ್ರ ಪತ್ರ ಬರೆದಿದೆ. ಈ ಪತ್ರದಲ್ಲಿ ಸರ್ಕಾರಗಳು ದೂರದೃಷ್ಟಿಯಿಂದ ನಿರ್ಬಂಧಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಕೊರೊನಾ ರೂಪಾಂತರಿ ಓಮಿಕ್ರಾನ್ ನೊಂದಿಗೆ ಡೆಲ್ಟಾ ರೂಪಾಂತರವು ಇನ್ನೂ ಹಲವೆಡೆ ಕಂಡು ಬರುತ್ತಿದೆ. ಹೀಗಾಗಿ ತ್ವರಿತ ಹಾಗೂ ನಿರ್ಬಂಧಗಳನ್ನು ಕೈಗೊಳ್ಳಬೇಕು ಎಂದು ಹೇಳಲಾಗಿದೆ.
ಅಲ್ಲದೇ, ಲಸಿಕೆಯನ್ನು ವೇಗವಾಗಿ ಜನರಿಗೆ ಮುಟ್ಟಿಸಬೇಕು. ಸಾರಿಗೆ, ಸಭೆ – ಸಮಾರಂಭಗಳು, ಕಚೇರಿಯಲ್ಲಿ ಜನದಟ್ಟಣೆಯಾಗದಂತೆ ನಿರ್ಬಂಧ ಹೇರಬೇಕು ಎಂದು ತಿಳಿಸಲಾಗಿದೆ. ರಾತ್ರಿ ಕರ್ಫ್ಯೂ ಬಗ್ಗೆ ಕೂಡ ಉಲ್ಲೇಖ ಮಾಡಲಾಗದೆ. ಜನರನ್ನು ಹೆಚ್ಚು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ಸ್ಥಳೀಯ ಮಟ್ಟದಲ್ಲಿ ಮನೆಗಳಲ್ಲಿನ ಪ್ರಕರಣಗಳ ಕುರಿತು ಹುಡುಕಾಟ ನಡೆಸಬೇಕು. ಸೋಂಕಿತ ವ್ಯಕ್ತಿಗಳ ಸಂಪರ್ಕಗಳನ್ನು ತ್ವರಿತವಾಗಿ ಪತ್ತೆ ಹಚ್ಚಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ.