alex Certify BIG NEWS : ನಟ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿಗೂ ಸಂಕಷ್ಟ ; ಚಾರ್ಜ್ ಶೀಟ್ ಸಲ್ಲಿಸಲು ನಿರ್ಧಾರ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಟ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿಗೂ ಸಂಕಷ್ಟ ; ಚಾರ್ಜ್ ಶೀಟ್ ಸಲ್ಲಿಸಲು ನಿರ್ಧಾರ!

ಚಿತ್ರದುರ್ಗ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರಣ್ಯ ಇಲಾಖೆ ಕೇಸ್ ನಲ್ಲಿ ದಾಸನಿಗೆ ಸಂಕಷ್ಟ ಎದುರಾಗಿದೆ.

ದರ್ಶನ್ ಮಾತ್ರವಲ್ಲದೇ ಅವರ ಪತ್ನಿ ವಿಜಯಲಕ್ಷ್ಮಿಗೂ ಕಂಟಕ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ಗೆ ಸಂಬಂಧಿಸಿದ್ದಂತೆ FIR ದಾಖಲಾಗಿ ನೋಟಿಸ್ ನೀಡಿದರೂ ಕೂಡ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಒಟ್ಟು ಐದು ನೋಟಿಸ್ ನೀಡಿದ್ದರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿಲ್ಲ. ಆದ್ದರಿಂದ ಈ ಕೇಸ್ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಸ್ಥಾನದಲ್ಲಿದ್ದಾರೆ.

ನಿಯಮಗಳ ಪ್ರಕಾರ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕುವುದು ಕಾನೂನು ಬಾಹಿರವಾಗಿದೆ. ಆದರೆ ಅಂದು ನಟ ದರ್ಶನ್ ಸೆಲೆಬ್ರಿಟಿಯಾಗಿದ್ದರಿಂದ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದರು. ಆದರೀಗ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಕೈಗೊಂಡಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...