alex Certify BREAKING : ಬೆನ್ನುನೋವಿಗೆ ಚಿಕಿತ್ಸೆ ಪಡೆಯಲು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆನ್ನುನೋವಿಗೆ ಚಿಕಿತ್ಸೆ ಪಡೆಯಲು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್ |Actor Darshan

ಮೈಸೂರು : ಬೆನ್ನುನೋವಿಗೆ ಚಿಕಿತ್ಸೆ ಪಡೆಯಲು ನಟ ದರ್ಶನ್ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ.

ಸಂಕ್ರಾಂತಿ ಹಬ್ಬದ ವೇಳೆಗೆ ನಟ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದು, ಫೆಬ್ರವರಿಯಲ್ಲಿ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ನಟ ದರ್ಶನ್ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ವೈದ್ಯರನ್ನು ಭೇಟಿ ಮಾಡಲಿರುವ ದರ್ಶನ್ ವೈದ್ಯರ ಸಲಹೆ ಪಡೆದು ಆಸ್ಪತ್ರೆಗೆ ದಾಖಲಾಗುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಬೆನ್ನುನೋವಿನ ಹಿನ್ನೆಲೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ನಟ ದರ್ಶನ್ ಆಪರೇಷನ್ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ನಟ ದರ್ಶನ್ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ವಾಪಸ್ ಬಂದಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದ್ದು, ಆರೋಪಿಗಳು ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...