
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ ಮಾಡಿದ್ದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ.
ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿಕೊಂಡ ನಟ ದರ್ಶನ್ ಅವರ ಬಾಡಿಗಾರ್ಡ್ ಮತ್ತಿತರರು ಆತನ ಮೇಲೆ ವಿನಯ್ ಎಂಬಾತನ ಶೆಡ್ಡಿನಲ್ಲಿ ಹಲ್ಲೆ ನಡೆಸಿದ್ದರು ಎಂಬ ಸಂಗತಿ ಈಗ ಬೆಳಕಿಗೆ ಬರುತ್ತಿದೆ. ಅಲ್ಲದೆ ಈ ಸಂದರ್ಭದಲ್ಲಿ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಕೂಡ ಹಾಜರಿದ್ದರು ಎಂದು ಹೇಳಲಾಗುತ್ತಿದೆ.
ರೇಣುಕಾ ಸ್ವಾಮಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಆತನ ಮರ್ಮಾಂಗಕ್ಕೆ ಒದ್ದ ಕಾರಣಕ್ಕೆ ಸ್ಥಳದಲ್ಲಿಯೇ ಮೃತಪಟ್ಟ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ನಟ ದರ್ಶನ್, ಇದೆಲ್ಲದಕ್ಕೂ ನೀನೇ ಕಾರಣ ಎಂದು ಪವಿತ್ರ ಗೌಡ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದಾಗಿ ಗಾಯಗೊಂಡಿದ್ದ ಅವರು ಆರ್ ಆರ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಿನ್ನೆ ಮಧ್ಯಾಹ್ನವಷ್ಟೇ ಡಿಸ್ಚಾರ್ಜ್ ಆಗಿದ್ದರು ಎನ್ನಲಾಗುತ್ತಿದೆ.