ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತಾದ ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟಿಸಿದೆ.ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಿಂದ ತೀರ್ಪು ಪ್ರಕಟಿಸಿದೆ.
ಬೆನ್ನು ನೋವಿನ ಕಾರಣ ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಡಿಸೆಂಬರ್ 11ರಂದು ದರ್ಶನ್ ಸರ್ಜರಿಗೆ ದಿನಾಂಕ ನಿಗದಿಯಾಗಿದ್ದರಿಂದ ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್ ದರ್ಶನ್ ಜಾಮೀನು ಕುರಿತಾದ ಆದೇಶ ಪ್ರಕಟಿಸಿದೆ.