ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮನೆಯಿಂದ ಹಾಸಿಗೆ, ಊಟ, ಪುಸ್ತಕ ಕೋರಿ ನಟ ದರ್ಶನ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ನಲ್ಲಿ ಇಂದು ನಟ ದರ್ಶನ್ ರಿಟ್ ಅರ್ಜಿ ವಿಚಾರಣೆ ನಡೆದಿದೆ.
ವಾದ ವಿವಾದ ಆಲಿಸಿದ ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ. . ದರ್ಶನ್ ಪರ ವಕೀಲ ಫಣೀಂದ್ರ ವಾದ ಮಂಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ. ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.