ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಹೌದು, ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಶ್ಯೂರಿಟಿ ನೀಡಲು ದರ್ಶನ್ ಕುಟುಂಬಸ್ಥರು ಸಜ್ಜಾಗಿದ್ದಾರೆ. ಜೈಲಿನ ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಸಂಜೆ ವೇಳೆಗೆ ಬಳ್ಳಾರಿ ಜೈಲಿನಿಂದ ದರ್ಶನ್ ಬಿಡುಗಡೆ ಆಗುವ ಸಾಧ್ಯತೆಯಿದೆ.
ಆರೋಪಿ ದರ್ಶನ್ ಇಚ್ಚಿಸಿದ ಆಸ್ಪತ್ರೆಗೆ ದಾಖಲಾಗಬಹುದು, 1 ವಾರದಲ್ಲಿ ದರ್ಶನ್ ಚಿಕಿತ್ಸೆಯ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ ಹಾಗೂ ಪಾಸ್ ಪೋರ್ಟ್ ಸರೆಂಡರ್ ಮಾಡಲು ಕೂಡ ಸೂಚನೆ ನೀಡಿದೆ.