ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ( Actor Darshan) ಬಿಗ್ ರಿಲೀಫ್ ಸಿಕ್ಕಿದ್ದು, 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಇಂದಿಗೆ ಆದೇಶ ಕಾಯ್ದಿರಿಸಿತ್ತು. ದರ್ಶನ್ ಪaರ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಹಾಗೂ ದರ್ಶನ್ ವಿರುದ್ಧ ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಸುದೀರ್ಘ ವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಎಸ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ.
1 ವಾರದಲ್ಲಿ ಚಿಕಿತ್ಸೆಯ ವಿವರಗಳನ್ನು ಕೋರ್ಟ್ ಗೆ ನೀಡಬೇಕು ಎಂದು ಹೈಕೋರ್ಟ್ ನ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ. ಜಾಮೀನು ಸಿಕ್ಕ ಹಿನ್ನೆಲೆ ನಟ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ.