ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಕಾರಾಗೃಹಕ್ಕೆ ತೆರಳಿ ದರ್ಶನ್ ವಿಚಾರಣೆ ಮಾಡಲು ಪೊಲೀಸರಿಂದ ಸಿದ್ಧತೆ ನಡೆದಿದೆ.
ನ್ಯಾಯಾಲಯದ ಅನುಮತಿ ಪಡೆದು ಬಳ್ಳಾರಿ ಜೈಲಿನಲ್ಲಿ ದರ್ಶನ್ ವಿಚಾರಣೆ ನಡೆಸಲಾಗುವುದು. ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಲಭ್ಯ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಮತ್ತೆ ವಿಚಾರಣೆ ನಡೆಸಲು ಆಗ್ನೇಯ ವಿಭಾಗದ ಪೊಲೀಸರು ನಿರ್ಧರಿಸಿದ್ದಾರೆ.
ರಾಜಾತಿಥ್ಯ ಸಂಬಂಧ ಈ ಹಿಂದೆಯೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ವಿಚಾರಣೆ ನಡೆಸಲಾಗಿತ್ತು. ಪ್ರಾಥಮಿಕ ತನಿಖೆಯ ವೇಳೆ ಆರೋಪಿ ದರ್ಶನ್ ವಿಚಾರಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸಾಕ್ಷ್ಯಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇವುಗಳನ್ನು ಮುಂದಿಟ್ಟುಕೊಂಡು ಬಳ್ಳಾರಿ ಜೈಲಿನಲ್ಲಿ ಮತ್ತೊಮ್ಮೆ ವಿಚಾರಣೆಗೊಳಪಡಿಸಲಿದ್ದಾರೆ ಎನ್ನಲಾಗಿದೆ.