ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕೊಡ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ನಟ ದರ್ಶನ್ ಗೆ ಜೈಲಿನಲ್ಲಿ ಏನೂ ವಿಶೇಷ ಸೌಲಭ್ಯ ಕೊಡ್ತಿಲ್ಲ, ಬಿರಿಯಾನಿ ಏನೂ ಕೊಡುತ್ತಿಲ್ಲ. ಬೇಕಾದರೆ ನನ್ನ ಜೊತೆ ಬನ್ನಿ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಹೇಳಿದರು. ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯ, ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಕಾಲ ಕಳೆಯುತ್ತಿದ್ದಾರೆ. ನಿನ್ನೆಯಷ್ಟೇ ನಟ ದರ್ಶನ್ ಕುಟುಂಬದ ಸದಸ್ಯರು ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿಯಾಗಿ ಹೋಗಿದ್ದಾರೆ.