ಬೆಂಗಳೂರು: ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ನಟ ದರ್ಶನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ.
ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.
ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಬೇಲ್ ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಯಾವಾಗ ಬೇಕಾದರೂ ಸರ್ಜರಿ ಮಾಡಿಸಿಕೊಳ್ಳಬಹುದೆಂಬ ಚಿಂತನೆಯಲ್ಲಿದ್ದಾರೆ. ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮಧ್ಯಾಹ್ನದ ನಂತರ ನಟ ದರ್ಶನ್ ಡಿಸ್ಚಾರ್ಜ್ ಆಗಿ ಮನೆಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.