
ಬೆಂಗಳೂರು: ಬೆಂಗಳೂರು ನಟ ದರ್ಶನ್ ‘ಮದರ್ ಇಂಡಿಯಾ’ ಸುಮಲತಾ ಅಂಬರೀಶ್ ಸೇರಿ ಆರು ಮಂದಿಯನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನ್ ಫಾಲೋ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್ ಜಾಮೀನು ಪಡೆದು ಹೊರಬಂದಿದ್ದಾರೆ. ಅವರು ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದರ್ಶನ್ ಆರು ಜನರನ್ನು ಅನ್ ಫಾಲೋ ಮಾಡಿದ್ದಾರೆ. ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿಹಾ, ಅಧಿಕೃತ ಫ್ಯಾನ್ಸ್ ಪೇಜ್ ಡಿ ಕಂಪನಿ, ಸಹೋದರ ದಿನಕರ್ ಮತ್ತು ಪುತ್ರ ವಿನೀಶ್ ಅವರನ್ನು ದರ್ಶನ್ ಅನ್ ಫಾಲೋ ಮಾಡಿದ್ದಾರೆ ಎನ್ನಲಾಗಿದ್ದು, ಇದು ಅಭಿಮಾನಿಗಳ ವಲಯದಲ್ಲಿ ಕುತೂಹಲ ಮೂಡಿಸಿದೆ.