ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟ ಹಾಗೂ ಪ್ರಮುಖ ನಾಯಕರಿಗೂ ಸಂಕಷ್ಟ ಎದುರಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೂಡ ದೂರು ದಾಖಲಾಗಿದೆ. ಅಲ್ಲದೇ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಇಬ್ಬರ ವಿರುದ್ಧ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ . ನಟ ದರ್ಶನ್ ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆಗಿತ್ತು, ಈ ಹಿನ್ನೆಲೆ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದೆ.
ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ ಅವರನ್ನು ಬಂಧಿಸಲಾಗಿದೆ. ವಿನಯ್ ಗುರೂಜಿ ಕೂಡ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ.ಸಂತೋಷ್ ರೀತಿ ನಟ ದರ್ಶನ್, ವಿನಯ್ ಗುರೂಜಿಯನ್ನೂ ಕರೆಸಿ ವಿಚಾರಿಸಬೇಕು. ಅವರು ಧರಿಸಿದ್ದು ಒರಿಜಿನಲ್ ಅಥವಾ ನಕಲಿಯೋ ಎಂಬುದು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಆಗ್ರಹಿಸಲಾಗಿದೆ. ಈ ಮೂಲಕ ಇಬ್ಬರಿಗೆ ಕಾನೂನು ಸಂಕಷ್ಟ ಎದುರಾಗಿದೆ.ಈ ಹಿಂದೆ ದರ್ಶನ್ ಮತ್ತು ರಾಕ್ಲೈನ್ ವೆಂಕಟೇಶ್ ಅವರು ಹುಲಿ ಉಗುರಿನ ಲಾಕೆಟ್ ಧರಿಸಿದ್ದರು. ಈ ಫೋಟೋಗಳು ವೈರಲ್ ಆಗುತ್ತಿದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸುತ್ತಿದ್ದಾರೆ.