ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಬಂದಿದ್ದು,, ಕೆಲಹೊತ್ತಿನಲ್ಲೇ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್ ವೈದ್ಯರ ಬಳಿ ಮಾಹಿತಿ ಪಡೆದು ನಂತರ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.
ತಮ್ಮ ಕುಟುಂಬಸ್ಥರ ಜೊತೆ ನಟ ದರ್ಶನ್ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಹೊರಟಿದ್ದು, ಇಂದು ಆಸ್ಪತ್ರೆಗೆ ದಾಖಲಾಗಿ ಇಂದಿನಿಂದ ಚಿಕಿತ್ಸೆ ಪಡೆಯಲಿದ್ದಾರೆ. ದರ್ಶನ್ ಬರುವ ಸುದ್ದಿ ತಿಳಿದು ಆಸ್ಪತ್ರೆಯತ್ತ ದರ್ಶನ್ ಫ್ಯಾನ್ಸ್ ದೌಡಾಯಿಸುತ್ತಿದ್ದಾರೆ. ಈ ಹಿನ್ನೆಲೆ ಆಸ್ಪತ್ರೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಗೆ ಡಿಸ್ಕ್ ಸಮಸ್ಯೆಯಿದೆ. ತಕ್ಷಣ ಸರ್ಜರಿ ಅಗತ್ಯವಿದೆ. ಸರ್ಜರಿ ಮಾಡಿಸದಿದ್ದಲ್ಲಿ ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದ್ದರು.