ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಹೃದಯಾಘಾತದಿಂದ ವಿಧಿವಶರಾಗಿದ್ದು, ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ.
ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ನಾಳೆ ಬುಧವಾರ ಬೆಳಿಗ್ಗೆ 11:30ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ಟಿಆರ್ ಮೀಲ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.
ದ್ವಾರಕೀಶ್ ಅವರ ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿಯೇ ನಾಳೆ ಬೆಳಿಗ್ಗೆವರೆಗೂ ಇಡಲಾಗುವುದು. ಗಣ್ಯರು ಹಾಗೂ ಕುಟುಂಬ ವರ್ಗದವರು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 11 ಗಂಟೆ ನಂತರ ಮೃತದೇಹವನ್ನು ಚಾಮರಾಜಪೇಟೆಯ ಟಿಆರ್ ಮೀಲ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಗುವುದು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿದುಬಂದಿದೆ.