ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು.ಈ ಬೆನ್ನಲ್ಲೇ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ನಟ ಗಣೇಶ್ ಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆ ನಟ ಗಣೇಶ್ ಎಚ್ಚೆತ್ತುಕೊಂಡಿದ್ದು, ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.
ನಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಗಳು ನಟ ಗಣೇಶ್ ಗೆ ಎಸಿಎಫ್ ವರದಿ ಅನ್ವಯ ನೋಟಿಸ್ ಕೊಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿತ್ತು. ಈ ಬೆನ್ನಲ್ಲೇ ಈ ಹಿನ್ನೆಲೆ ನಟ ಗಣೇಶ್ ಎಚ್ಚೆತ್ತುಕೊಂಡಿದ್ದು, ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.
ವಾಸ ಮತ್ತು ಕೃಷಿ ಉದ್ದೇಶದಿಂದ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬೃಹತ್ ಕಟ್ಟಡ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿತ್ತು. ಕಟ್ಟಡ ನಿರ್ಮಾಣಕ್ಕೆ ದೊಡ್ಡ ಗಾತ್ರದ ಕಾಂಕ್ರೀಟ್ ಪಿಲ್ಲರ್ ಗಳನ್ನು ಹಾಕಲಾಗಿದ್ದು, ಜೆಸಿಬಿ ಬಳಕೆ ಮಾಡಲಾಗಿತ್ತು. ಗುಂಡ್ಲುಪೇಟೆ ತಾಲೂಕು ಹಂಗಳ ಹೋಬಳಿ ಜಕ್ಕಳ್ಳಿಯಲ್ಲಿ ಒಂದು ಎಕರೆ 24 ಗುಂಟೆ ಜಮೀನಿದ್ದು, ವಾಸದ ಮನೆ ಮತ್ತು ತೋಟಗಾರಿಕೆ ಉದ್ದೇಶದಿಂದ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಗಣೇಶ್ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು.
ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಮೀನು ಇದೆ. ಅಧಿಸೂಚನೆ ಪ್ರಕಾರ ವಾಣಿಜ್ಯ ಚಟುವಟಿಕೆಗಳಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ಅವಕಾಶ ಇಲ್ಲ. ಶಾಶ್ವತ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ತಾತ್ಕಾಲಿಕ ಕಟ್ಟಡಗಳನ್ನು ವಸತಿ ಉದ್ದೇಶಕ್ಕೆ ಮಾತ್ರ ನಿರ್ಮಿಸಿ ಬಳಸಬಹುದಾಗಿದೆ. ವನ್ಯಜೀವಿಗಳ ಸಂಚಾರಕ್ಕೆ ತೊಂದರೆ ಮಾಡುವಂತಿಲ್ಲ. ಇವೆಲ್ಲ ಷರತ್ತುಗಳೊಂದಿಗೆ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿ ಗಣೇಶ್ ಅವರಿಗೆ ಅನುಮತಿ ನೀಡಿದ್ದು, ಮಾರ್ಗಸೂಚಿಗೆ ವಿರುದ್ಧವಾಗಿ ಬೃಹತ್ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಲಾಗಿತ್ತು.