ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲಿ ನಡೆದಿದೆ.
45 ವರ್ಷದ ಗಿರಿ ದಿನೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದ ಗಿರಿ ದಿನೇಶ್ ಅವರನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಗಿರಿ ದಿನೇಶ್, ನವಗ್ರಹ, ಚಮಕಾಯಿಸಿ, ಚಿಂದಿವುಡಾಯಿಸಿ, ವಜ್ರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ನವಗ್ರಹ ಸಿನಿಮಾದ ಶೆಟ್ಟಿ ಪಾತ್ರ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು.