ಬೆಂಗಳೂರು: ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರು ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ. ಆದರೆ, ಸುದೀಪ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ್ದಾರೆ. ಅವರ ಮಾದರಿ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ತುಮಕೂರು ವಿವಿ ಸುದೀಪ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ ಕೈಗೊಂಡಿದೆ. ವಿವಿಯ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಸುದೀಪ್ ಅವರ ಗಮನಕ್ಕೆ ತರಲಾಗಿದೆ. ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಹೃದಯಪೂರ್ವಕವಾಗಿ ಧನ್ಯವಾದ ತಿಳಿಸಿರುವ ಸುದೀಪಗ ಅವರು ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಅನೇಕ ಹಿರಿಯರಿದ್ದಾರೆ. ಅವರಿಗೆ ಡಾಕ್ಟರೇಟ್ ನೀಡಿ ಎಂದು ವಿನಮ್ರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ್ದಾರೆ.