ಬೆಂಗಳೂರು : ನಟ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.
ಹೌದು, ತೆಲುಗಿನ ಹನುಮಾನ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದು, ಇದರ ನಡುವೆ ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಘೋಷಣೆಯಾಗಿದೆ.
ಈ ಚಿತ್ರವನ್ನು ಸಂದೀಪ್ ಸಿಂಗ್ ನಿರ್ದೇಶಿಸುತ್ತಿದ್ದು, 2027 ರ ಜನವರಿ 21 ರಂದು ತೆರೆಗೆ ಬರಲಿದೆ. ಈ ಸಿನಿಮಾ ಹಿಂದಿ, ಮರಾಠಿ, ಕನ್ನಡ ಸೇರಿ 6 ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.ಸದ್ಯ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿದ್ದು, ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.
Our Honour & Privilege, Presenting the Epic Saga of India’s Greatest Warrior King – The Pride of Bharat: #ChhatrapatiShivajiMaharaj. #ThePrideOfBharatChhatrapatiShivajiMaharaj
This isn’t just a film – it’s a battle cry to honor a warrior who fought against all odds, challenged… pic.twitter.com/CeXO2K9H9Q
— Rishab Shetty (@shetty_rishab) December 3, 2024