ಅಮೆರಿಕ : ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಮಯಾಮಿ ಬೀಚ್ ನಲ್ಲಿ ಪತ್ನಿ ಜೊತೆ ಸುತ್ತಾಟ ನಡೆಸಿದ್ದಾರೆ.
ಅಮೆರಿಕದ ಸಿಟಿಗಳಲ್ಲಿ ಸುತ್ತಾಡಿರುವ ನಟ ಶಿವಣ್ಣ ಪತ್ನಿ ಜೊತೆ ಮಯಾಮಿ ಬೀಚ್’ಗೂ ಹೋಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟ ಶಿವಣ್ಣ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಸರ್ಜರಿ ಬಳಿಕ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತೀಚಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಜನವರಿ ಅಂತ್ಯದಲ್ಲಿ ಅಮೆರಿಕದಿಂದ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು,ಸದ್ಯ ಅವರಿಗೆ ಒಂದು ಚೆಕಪ್ ಬಾಕಿ ಇದೆ. ಅದನ್ನು ಮುಗಿಸಿ ಜ.26 ಕ್ಕೆ ಭಾರತಕ್ಕೆ ವಾಪಸ್ ಆಗಲಿದ್ದಾರೆ.