ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಪುತ್ರಿ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದೇವರ ದಯೆಯಿಂದ ಅಪ್ಪನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಪ್ಪನ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಚೇತರಿಕೆಯ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ. ಎಲ್ಲರ ಹಾರೈಕೆಗೆ ಧನ್ಯವಾದಗಳು ಎಂದು ನಿವೇದಿತಾ ಪೋಸ್ಟ್ ಮಾಡಿದ್ದಾರೆ.
“ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸ್ಥೆರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ.
ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ.”
ಧನ್ಯವಾದಗಳು, ನಿವೇದಿತಾ ಶಿವರಾಜಕುಮಾರ್
It is the prayers and love of all the fans and our loved ones that have kept us going through tough times.
Thank you for your support!✨ pic.twitter.com/eaCF7lqybc— Niveditha Shivarajkumar (@NivedithaSrk) December 25, 2024