ಚೆನ್ನೈ : ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳು ನಟ ಸಿಂಬು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶೂಟಿಂಗ್ ನಲ್ಲಿ ಇದ್ದ ಸಮಯದಲ್ಲಿ ಅವರಲ್ಲಿ ವೈರಸ್ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ, ಅವರಲ್ಲಿ ಕೋವಿಡ್ ಸಂಬಂಧಿಸಿದ ಸೋಂಕು ಕಾಣಿಸಿಕೊಂಡಿಲ್ಲ ಎಂದು ವೈದ್ಯರು ಹೇಳಿದ್ದಾರೆ. ನಟ ಸಿಂಬು ಅವರ ಮ್ಯಾನೇಜರ್ ಕೂಡ, ಕೋವಿಡ್ ಸೋಂಕು ತಗುಲಿಲ್ಲ. ಅನಾರೋಗ್ಯ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎರಡು ದಿನಗಳಲ್ಲಿ ಅವರು ಗುಣಮುಖರಾಗಿ ಮನೆಗೆ ಬರಲಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ. ನಟ ಸಿಂಬು ಅವರು ನಟಿಸಿರುವ ನಾಡು ಸಿನಾ ಹಾಗೂ ಈಶ್ವರನ್ ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿವೆ.