![Anupama Parameswaran mourns the loss of her pet dogs: The pain is unbearable - India Today](https://akm-img-a-in.tosshub.com/indiatoday/images/story/202006/BeFunky_Collage_46.jpeg?size=690:388)
ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ನಟಿ ಅನುಪಮಾ ಪರಮೇಶ್ವರನ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅನುಪಮಾ ಪರಮೇಶ್ವರನ್ 2015ರಲ್ಲಿ ತೆರೆಕಂಡ ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದರು. 2016 ರಂದು ಅಆ ಎಂಬ ತೆಲುಗು ಸಿನಿಮಾದಲ್ಲಿ ತೆರೆ ಹಂಚಿಕೊಂಡರು.
ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರ ರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ಅನುಪಮಾ ಪರಮೇಶ್ವರನ್ 2019ರಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ನಟಸಾರ್ವಭೌಮ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದರು. ನಟಿ ಅನುಪಮಾ ಇತ್ತೀಚಿಗೆ ‘ಟಿಲ್ಲು ಸ್ಕ್ವಯರ್’ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಸಿನಿಮಾ ಕಲಾವಿದರು ಅನುಪಮಾ ಪರಮೇಶ್ವರನ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.