
ಕಿರುತೆರೆ ಮತ್ತು ಬೆಳ್ಳಿ ತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ನಟಿ ಅನುಷಾ ರೈ ಇಂದು ತಮ್ಮ 27ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸರಳವಾಗಿ ತಮ್ಮ ಮನೆಯಲ್ಲೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ನಟಿ ಅನುಷಾ ರೈ 2016 ರಲ್ಲಿ ಕಸ್ತೂರಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅನನ್ಯ’ ಧಾರವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದರು. ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಅನುಷಾ ರೈ 2017ರಲ್ಲಿ ‘ಮಹಾನುಬಾವರು’ ಚಿತ್ರದಲ್ಲಿ ಅಭಿನಯಿಸಿದರು. ಬಳಿಕ ‘ದಮಯಂತಿ’ ‘bmw’, ‘ಕಡಕ್’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡರು.’ಬೆಂಗಳೂರಿನ ಇನ್’ ಮತ್ತು ತೂಫಾನ್ ಚಿತ್ರ ತಂಡ ಇಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅನುಷಾ ರೈ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ.

