ಸೀರೆಯಲ್ಲಿ ಮಿಂಚಿದ ನಟಿ ಅನುಷಾ ರೈ 28-12-2024 4:18PM IST / No Comments / Posted In: Featured News, Live News, Entertainment ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ನಟಿ ಅನುಷಾ ರೈ ಇತ್ತೀಚೆಗೆ ತಮ್ಮ ಮುಂಬರುವ ಸಿನಿಮಾಗಳ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಫೋಟೋಶೂಟ್ನಲ್ಲೂ ಸಾಕಷ್ಟು ಪ್ರಾಮುಖ್ಯತೆ ನೀಡುವ ಅನುಷಾ ಇತ್ತೀಚಿಗಷ್ಟೇ ಹಸಿರು ಬಣ್ಣದ ಸೀರೆಯನ್ನುಟ್ಟು ಫೋಟೋಗೆ ಪೋಸ್ ನೀಡಿದ್ದಾರೆ. ತಮ್ಮ instagram ಖಾತೆಯಲ್ಲಿ ಶೇರ್ ಮಾಡಿದ್ದು, ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. 2016ರಲ್ಲಿ ಕಸ್ತೂರಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅಣ್ಣಯ್ಯ’ ಧಾರಾವಾಹಿಯಲ್ಲಿ ಗೌರಿ ಪಾತ್ರದ ಮೂಲಕ ಎಲ್ಲರ ಮನೆ ಮಾತಾಗಿದ್ದ ಅನುಷಾ ರೈ 2017 ರಂದು ‘ಮಹಾನುಭಾವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದರು. ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದರು.