alex Certify 34ನೇ ವಸಂತಕ್ಕೆ ಕಾಲಿಟ್ಟ ನಟಿ ದೀಪಾ ಸನ್ನಿಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

34ನೇ ವಸಂತಕ್ಕೆ ಕಾಲಿಟ್ಟ ನಟಿ ದೀಪಾ ಸನ್ನಿಧಿ

ಚಿಕ್ಕಮಗಳೂರು ಬೆಡಗಿ ದೀಪಾ ಸನ್ನಿಧಿ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ.

2011ರಲ್ಲಿ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸಾರಥಿ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರಿಗೆ ಮೊದಲ ಚಿತ್ರದಲ್ಲೇ ಭರ್ಜರಿ ಯಶಸ್ಸು ಸಿಕ್ಕಿತು. ಹಲವಾರು ಅವಾರ್ಡ್ಗಳು ದೊರೆತವು. ಬಳಿಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೊತೆ ‘ಪರಮಾತ್ಮ’ ಸಿನಿಮಾದಲ್ಲಿ ಅಭಿನಯಿಸಿದರು.

ನಟಿ ದೀಪಾ ಸನ್ನಿಧಿ 2015ರಲ್ಲಿ ತೆರೆಕಂಡ ‘ಎನಕ್ಕುಲ್ ಒರುವನ್’ ನಲ್ಲಿ ಅಭಿನಯಿಸುವ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. 2017 ರಂದು ‘ಚಕ್ರವರ್ತಿ’ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಇವರು ಮಾಂಜ ಸಿನಿಮಾದಲ್ಲಿ ನಟಿಸುತ್ತಿದ್ದಾರೆ, ಸೋಶಿಯಲ್ ಮೀಡಿಯಾದಲ್ಲಿ ಇಂದು ಹಲವಾರು ಸಿನಿ ತಾರೆಯರು ದೀಪಾ ಸನ್ನಿಧಿಯವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...