ಬಾಲಿವುಡ್ ನ ಬೇಡಿಕೆಯ ನಟಿ ದೀಪಿಕಾ ಪಡುಕೋಣೆ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2006ರಲ್ಲಿ ತೆರೆ ಕಂಡ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಐಶ್ವರ್ಯ’ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು 2007 ರಲ್ಲಿ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅವರ ‘ಓಂ ಶಾಂತಿ ಓಂ’ ಚಿತ್ರದಲ್ಲಿ ತೆರೆ ಹಂಚಿಕೊಂಡರು. ದೀಪಿಕಾ ಪಡುಕೋಣೆ ಅವರಿಗೆ ನಂತರ ಬಾಲಿವುಡ್ ನಲ್ಲಿ ಸಾಲು ಸಾಲು ಆಫರ್ ಗಳು ಬಂದವು.
ದೀಪಿಕಾ ಪಡುಕೋಣೆ ಕಳೆದ ವರ್ಷ ಶಾರುಖ್ ಖಾನ್ ನಟನೆಯ ‘ಪಠಾಣ್’ ನಲ್ಲಿ ಅಭಿನಯಿಸಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್ ಧೂಳೆಬ್ಬಿಸುವ ಮೂಲಕ ಹೊಸ ದಾಖಲೆ ಬರೆದಿತ್ತು ಇತ್ತೀಚಿಗೆ ‘ಫೈಟರ್’ ಸೇರಿದಂತೆ, ‘kalki 2898 AD’ ‘ಸಿಂಗಂ ಅಗೈನ್’ ಚಿತ್ರದಲ್ಲಿ ನಟಿಸಿದ್ದಾರೆ.
https://twitter.com/ottplayapp/status/1743147840480895441?ref_src=twsrc%5Egoogle%7Ctwcamp%5Eserp%7Ctwgr%5Etweet