ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಪಾರ್ಟಿಯಲ್ಲಿ ಪಾಲ್ಗೊಂಡಿದ್ದರೂ ಅವರು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲವೆಂದು ವಿಡಿಯೋ ಹರಿಬಿಟ್ಟಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದರು. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಪೊಲೀಸರು ಹೇಮಾ ಅವರನ್ನು ಬಂಧಿಸಿದ್ದರು.
ಜೂನ್ 3ರಂದು ಹೇಮಾ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ಜಾಮೀನು ದೊರೆತಿದೆ.