ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018ರಲ್ಲಿ ತೆರೆ ಕಂಡ ‘ಧಡಕ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಬಾಲಿವುಡ್ ಚಿತ್ರರಂಗದ ಬೇಡಿಕೆಯ ನಟಿಯಾದರು.
ನಟಿ ಜಾನ್ವಿ ಕಪೂರ್ ಕಳೆದ ವರ್ಷ ಐಟಂ ಸಾಂಗ್ ಗಳಲ್ಲಿ ಹೆಜ್ಜೆ ಹಾಕಿದ್ದು, ಇತ್ತೀಚಿಗೆ ‘ಮಿಸ್ಟರ್ ಅಂಡ್ ಮಿಸೆಸ್ ಮಾಹಿ’ ಸೇರಿದಂತೆ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ ಪಾರ್ಟ್ 1’ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ಆಕ್ಷನ್ ಡ್ರಾಮಾ ಕಥಾ ಹಂದರ ಹೊಂದಿರುವ ‘ದೇವರ’ ಚಿತ್ರ ಅಕ್ಟೋಬರ್ ಹತ್ತಕ್ಕೆ ತೆಲುಗು ಸೇರಿದಂತೆ ಸುಮಾರು ಐದು ಭಾಷೆಗಳಲ್ಲಿ ತೆರೆ ಕಾಣಲಿದೆ.
ಜಾನ್ವಿ ಕಪೂರ್ ಹುಟ್ಟುಹಬ್ಬಕ್ಕೆ ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯದಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.