ಬಾಲಿವುಡ್ ಚಿತ್ರರಂಗದ ಪ್ರತಿಭಾವಂತ ನಟಿ ಕಂಗನಾ ರನೌತ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2006ರಲ್ಲಿ ಇಮ್ರಾನ್ ಅಶ್ಮಿ ಜೊತೆ ‘ಗ್ಯಾಂಗ್ ಸ್ಟರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಬಳಿಕ ಅದೇ ವರ್ಷ ‘ವೋ ಲಮ್ಹೆ’ದಲ್ಲಿ ತೆರೆ ಹಂಚಿಕೊಂಡರು. 2008ರಲ್ಲಿ ‘ಧಾಮ್ ಧೂಮ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು.
ನಟಿ ಕಂಗನಾ ರನೌತ್ ಕಳೆದ ವರ್ಷ ‘ಚಂದ್ರಮುಖಿ 2’ ಚಿತ್ರದಲ್ಲಿ ನಟಿಸಿದ್ದು, ಇತ್ತೀಚಿಗೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಕಂಗನಾ ರನೌತ್ ಅವರೇ ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿಯನ್ನು ಒತ್ತಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಮತ್ತು ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.