
2014ರಲ್ಲಿ ತೆರೆಕಂಡ ಕಬೀರ್ ಸದಾನಂದ್ ನಿರ್ದೇಶನದ ಕಾಮಿಡಿ ಡ್ರಾಮಾ ಕಥಾಧಾರಿತ ‘ಫಗ್ಲಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2016 ರಲ್ಲಿ ಸುಶಾಂತ್ ಸಿಂಗ್ ನಟನೆಯ ‘ಎಂಎಸ್ ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ’ ನಲ್ಲಿ ಸಾಕ್ಷಿ ರಾವತ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡರು.
ಮಹೇಶ್ ಬಾಬು ಜೊತೆ ‘ಭಾರತ್ ಅನೆ ನೇನು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಕಿಯಾರಾ ಅಡ್ವಾಣಿ ಟಾಲಿವುಡ್ ಗೂ ಎಂಟ್ರಿ ಕೊಟ್ಟರು. ಬಳಿಕ ತೆಲುಗು ಹಾಗೂ ಹಿಂದಿ ಚಿತ್ರರಂಗದ ಜನಪ್ರಿಯ ನಟಿಯಾಗಿ ಹೊರಹೊಮ್ಮಿದರು. ನಟಿ ಕಿಯಾರಾ ಅಡ್ವಾಣಿ ಇತ್ತೀಚೆಗೆ ‘ಗೇಮ್ ಚೇಂಜರ್’ ಸೇರಿದಂತೆ ‘ವಾರ್ 2’ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.