alex Certify BIG NEWS: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಇರುವ ಲೀಲಾವತಿ ಅವರ ತೋಟದ ಗೇಟ್ ಬಳಿ ನಿನ್ನೆ ರಾತ್ರಿ 10:30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ.

ಈ ಭಾಗದಲ್ಲಿ ಚಿರತೆ ಒಡಾಡುತ್ತಿರುವ ಹಿನ್ನೆಲೆಯಲ್ಲಿ ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಬೋಡಸಂದ್ರ ಹಂದಿಗುಂಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...