ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಡ್ಯಾನ್ಸ್ ವಿಡಿಯೋಗಳನ್ನು ಹಾಗೂ ಫೋಟೋಗಳನ್ನು ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ನಮ್ರತಾ ಗೌಡ ಇತ್ತೀಚಿಗಷ್ಟೇ ಫೋಟೋ ಶೂಟ್ ಮಾಡಿಸಿದ್ದು, ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಒಂದೊಂದಾಗಿ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
2011ರಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕೃಷ್ಣ ರುಕ್ಮಿಣಿ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ನಮ್ರತಾ ಗೌಡ ಬಳಿಕ ‘ಮಂಗಳ ಗೌರಿ’ ಯಲ್ಲಿ ಕಾಣಿಸಿಕೊಂಡರು ಜೀ ಕನ್ನಡದಲ್ಲಿ ‘ನಾಗಿಣಿ2’ ಧಾರಾವಾಹಿಯಲ್ಲಿ ಅಭಿನಯಿಸುವ ಮೂಲಕ ಎಲ್ಲರ ಮನೆಮಾತಾದರು ಇತ್ತೀಚೆಗೆ ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಯಾಗಿದ್ದರು.