alex Certify BIG NEWS: ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ ನಟಿ ಪವಿತ್ರ ಲೋಕೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ ನಟಿ ಪವಿತ್ರ ಲೋಕೇಶ್

ತಮ್ಮ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ಖಾಸಗಿ ಬದುಕಿನ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ನಟಿ ಪವಿತ್ರ ಲೋಕೇಶ್ ಕೆಲ ದಿನಗಳ ಹಿಂದೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಇದೀಗ ನಟಿ, ಮೈಸೂರಿನ ವಿ ವಿ ಪುರಂ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಾಧ್ಯಮದವರೆಂದು ಹೇಳಿಕೊಂಡ ಕೆಲವು ವ್ಯಕ್ತಿಗಳು ತಮ್ಮನ್ನು ಹಿಂಬಾಲಿಸುತ್ತಿದ್ದಾರೆ. ಈ ಮೂಲಕ ನನ್ನ ಖಾಸಗಿ ಬದುಕಿನ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದ್ದಾರೆ ಎಂದು ಪವಿತ್ರ ಲೋಕೇಶ್ ಆರೋಪಿಸಿದ್ದು, ಅವರುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ತೆಲುಗು ನಟ ನರೇಶ್ ಅವರೊಂದಿಗೆ ಪವಿತ್ರ ಲೋಕೇಶ್ ಮದುವೆಯಾಗಿದ್ದಾರೆ ಎಂಬ ವದಂತಿ ಕೆಲ ದಿನಗಳಿಂದ ಹರಿದಾಡುತ್ತಿದ್ದು, ಇದಕ್ಕೆ ಸ್ಪಷ್ಟನೆ ನೀಡಿದ್ದ ಪವಿತ್ರ ಲೋಕೇಶ್, ನಮ್ಮಿಬ್ಬರ ಮಧ್ಯೆ ಯಾವುದೇ ಸಂಬಂಧವಿಲ್ಲ. ಮದುವೆಯೂ ಆಗಿಲ್ಲ. ನರೇಶ್ ನನ್ನ ಉತ್ತಮ ಸ್ನೇಹಿತರು ಅಷ್ಟೇ ಎಂದು ತಿಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...