alex Certify 40ನೇ ವಸಂತಕ್ಕೆ ಕಾಲಿಟ್ಟ ನಟಿ ಪೂಜಾ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

40ನೇ ವಸಂತಕ್ಕೆ ಕಾಲಿಟ್ಟ ನಟಿ ಪೂಜಾ ಗಾಂಧಿ

ನಟಿ ಪೂಜಾ ಗಾಂಧಿ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2001ರಲ್ಲಿ ತೆರೆಕಂಡ ‘ಖತ್ರೋನ್ ಕೆ ಖಿಲಾಡಿ‘ ಎಂಬ ಹಿಂದಿ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಹಲವಾರು ಭಾಷೆಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ.

ಕನ್ನಡದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ‘ಮುಂಗಾರು ಮಳೆ’ ಚಿತ್ರದಲ್ಲಿ ಅಭಿನಯಿಸಿದರು. ಈ ಸಿನಿಮಾ ಒಂದು ವರ್ಷ ಪ್ರದರ್ಶನ ಕಾಣುವ ಮೂಲಕ ಬಾಕ್ಸ್ ಆಫೀಸ್ ಧೂಳ್ ಎಬ್ಬಿಸಿ ಹೊಸ ದಾಖಲೆ ಬರೆದಿತ್ತು.

ನಟಿ ಪೂಜಾ ಗಾಂಧಿ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಬೆಂಗಾಲಿ, ಚಿತ್ರರಂಗದಲ್ಲಿ ಅಭಿನಯಿಸಿದ್ದಾರೆ. ‘ದಂಡುಪಾಳ್ಯ’ ಚಿತ್ರದ ಮೂರು ಭಾಗಗಳಲ್ಲೂ ಕಾಣಿಸಿಕೊಂಡಿದ್ದ ಪೂಜಾ ಗಾಂಧಿ ಇತ್ತೀಚೆಗೆ ‘ಸಂಹಾರಿಣಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...