ಬೆಂಗಳೂರು: ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ.
ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ಮಾಡಿಕೊಟ್ಟ ಆರೋಪವಿತ್ತು. ಆದರೆ, ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು. ಪ್ರಕರಣ ರದ್ದುಪಡಿಸಿ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣವನ್ನು ಕೂಡ ರದ್ದು ಮಾಡಲಾಗಿದೆ.