ನಟಿ ರಕುಲ್ ಪ್ರೀತ್ ಲೇಟೆಸ್ಟ್ ಫೋಟೋಶೂಟ್ 12-12-2024 6:32PM IST / No Comments / Posted In: Featured News, Live News, Entertainment ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದ ಬೇಡಿಕೆಯ ನಟಿ ರಕುಲ್ ಪ್ರೀತ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ನಟಿ ರಕುಲ್ ಪ್ರೀತ್ ಇತ್ತೀಚಿಗಷ್ಟೇ ಫೋಟೋಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. 2009ರಲ್ಲಿ ತೆರೆ ಕಂಡ ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ತಮಿಳು ಹಿಂದಿ ಹಾಗೂ ತೆಲುಗು ಭಾಷೆಯಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಇತ್ತೀಚಿಗಷ್ಟೇ ‘ಇಂಡಿಯನ್ 2’ ನಲ್ಲಿ ಕಾಣಿಸಿಕೊಂಡಿದ್ದ ಇವರು ‘ಇಂಡಿಯನ್ 3’ ಮತ್ತು ‘ದೇ ದೇ ಪ್ಯಾರ್ ದೇ 2’ ಎಂಬ ಹಿಂದಿ ಚಿತ್ರದ ಶೂಟಿಂಗ್ನಲ್ಲಿ ನಿರತರಾಗಿದ್ದಾರೆ.