ಟ್ರೋಲ್ ಆಗುತ್ತೆ ಖ್ಯಾತಿಯ ನಟಿ ರೀಷ್ಮಾ ನಾಣಯ್ಯ ಹಳದಿ ಸೀರೆಯನ್ನುಟ್ಟು ಫೋಟೋ ಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗಳಲ್ಲಿ ರೀಷ್ಮಾ ನಾಣಯ್ಯ ಗ್ಲಾಮರ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ. ಈ ಪೋಸ್ಟ್ಗಳಿಗೆ ಸಾಕಷ್ಟು ಪ್ರತಿಕ್ರಿಯೆಗಳು ಹರಿದು ಬಂದಿವೆ.
2022 ರಲ್ಲಿ ತೆರೆಕಂಡ ‘ಏಕ್ ಲವ್ ಯಾ’ ಚಿತ್ರದ ಮೂಲಕ ಸ್ಯಾಂಡಲ್ ವು ವುಡ್ ಗೆ ಪಾದಾರ್ಪಣೆ ಮಾಡಿದ ರೀಷ್ಮಾ ನಾಣಯ್ಯ ಕಳೆದ ವರ್ಷ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಮತ್ತು’ ಸ್ಪೂಕಿ ಕಾಲೇಜ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು, ಇತ್ತೀಚಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರ ‘UI’ ಹಾಗೂ ‘ಕೆಡಿ’ ಶೂಟಿಂಗ್ನಲ್ಲಿ ಬಿಜಿಯಾಗಿದ್ದಾರೆ.