ತೆಲುಗು ಹಾಗೂ ಮಲಯಾಳಂ ಚಿತ್ರರಂಗದ ಬೇಡಿಕೆಯ ನಟಿ ಸಂಯುಕ್ತ ಮೆನನ್ ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟಿವ್ ಆಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಸಂಯುಕ್ತ ಇತ್ತೀಚಿಗಷ್ಟೇ ಗುಲಾಬಿ ಬಣ್ಣದ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿದ್ದು ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಈ ಫೋಟೋಗಳನ್ನು instagram ನಲ್ಲಿ ಅಪ್ಲೋಡ್ ಮಾಡಿದ್ದು ಗಾರ್ಜಿಯಸ್, ಬ್ಯೂಟಿಫುಲ್ ಹೀಗೆ ಬಗೆ ಬಗೆಯ ಕಮೆಂಟ್ಗಳನ್ನು ಮಾಡಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ ತೆಲುಗು ಹಾಗೂ ಮಲಯಾಳಂನ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿರುವ ಇವರು 2022 ರಂದು ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗಾಳಿಪಟ 2′ ದಲ್ಲಿ ತೆರೆ ಹಂಚಿಕೊಂಡಿದ್ದರು.’ಮಹಾರಾಗ್ನಿ: ಕ್ವೀನ್ ಆಫ್ ಕ್ವೀನ್ಸ್’ ಮೂಲಕ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಮಲಯಾಳಂನ ರಾಮ್ ಹಾಗೂ ತೆಲುಗಿನ ‘ಸ್ವಯಂಭು’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.