ಪುಟ್ಟಗೌರಿ ಧಾರಾವಾಹಿ ಖ್ಯಾತಿಯ ನಟಿ ಸಾನ್ಯ ಅಯ್ಯರ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಸಾನ್ಯ ಅಯ್ಯರ್ ನಿನ್ನೆಯಷ್ಟೇ ಗೌರಿ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್ ಕಾರ್ಯಕ್ರಮದಲ್ಲಿ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಈ ಫೋಟೋಗಳನ್ನು ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ನಟಿ ಸಾನ್ಯ ಅಯ್ಯರ್ ಸದ್ಯ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಜೊತೆ ‘ಗೌರಿ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು, ಇದೇ ಆಗಸ್ಟ್ 15 ರಂದು ತೆರೆ ಮೇಲೆ ಬರಲು ಸಜ್ಜಾಗಿದೆ. ನಿನ್ನೆಯಷ್ಟೇ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಇದರ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.