ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಶ್ರೀ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ.ತಮ್ಮ instagram ನಲ್ಲಿ ದಿನಕ್ಕೊಂದು ಫೋಟೋ ಶೇರ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ನಟಿ ಇತ್ತೀಚಿಗಷ್ಟೇ ಬೀಚ್ ನಲ್ಲಿ ಫೋಟೋಶೂಟ್ ಮಾಡಿಸಿದ್ದು, ತಮ್ಮ ಹಾಟ್ ಲುಕ್ ಮೂಲಕ ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚಿಸಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿದೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ‘ಅರಸು’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಇವರು ಕಳೆದ ವರ್ಷ ರಿಯಲ್ ಸ್ಟಾರ್ ಉಪೇಂದ್ರ ಅವರ ‘ಕಬ್ಜಾ’ ದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇವರ ‘ಮ್ಯೂಸಿಕ್ ಸ್ಕೂಲ್’ ಎಂಬ ಸಿನಿಮಾ ಕೂಡ ಅದೇ ವರ್ಷದಂದು ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಂಡಿತ್ತು.