
ಬೆಂಗಳೂರು: ರಾಜ್ಯ ಮಹಿಳಾ ಆಯೋಗದಿಂದ ಬಿಜೆಪಿ ನಾಯಕಿ, ನಟಿ ಶ್ರುತಿ ಅವರಿಗೆ ನೋಟಿಸ್ ನೀಡಲಾಗಿದೆ. ಶಕ್ತಿ ಯೋಜನೆ ಬಗ್ಗೆ ನಟಿ ಶ್ರುತಿ ಹೇಳಿಕೆ ನೀಡಿದ್ದರು.
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಶಕ್ತಿ ಯೋಜನೆಯಿಂದ ಮಹಿಳೆಯರು, ಮಕ್ಕಳು, ಉಪವಾಸವಿರಬೇಕಾಗುತ್ತದೆ. ಇಂತಹ ಭಾಗ್ಯಗಳನ್ನು ಕೊಟ್ಟು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶ್ರುತಿ ಹೇಳಿಕೆ ನೀಡಿದ್ದರು. ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸಿದ್ದರು.
ಸಾಮಾಜಿಕ ಕಾರ್ಯಕರ್ತ ಮನೋಹರ್ ಈ ಕುರಿತಾಗಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ನೋಟಿಸ್ ಜಾರಿ ಮಾಡಿದ್ದು, ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದಾರೆ.