
ತೆಲುಗು, ತಮಿಳು, ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಶ್ರುತಿ ಹಾಸನ್ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ.
2000ರಲ್ಲಿ ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಂಡ ‘ಹೇ ರಾಮ್’ ಚಿತ್ರದಲ್ಲಿ ಬಾಲ ನಟಿಯಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು. 2009ರಲ್ಲಿ ‘ಲಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ಇವರಿಗೆ ಬಳಿಕ ಸಾಕಷ್ಟು ಆಫರ್ ಗಳು ಬಂದವು. 2011 ರಲ್ಲಿ ಸಿದ್ದಾರ್ಥ್ ಜೊತೆ ‘ಅನಗನಗ ಓ ಧೀರುಡು’ ನಲ್ಲಿ ಅಭಿನಯಿಸುವ ಮೂಲಕ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು.
ನಟಿ ಶೃತಿ ಹಾಸನ್ ಇತ್ತೀಚಿಗೆ ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ ನಲ್ಲಿ ಆಧ್ಯ ಕೃಷ್ಣಕಾಂತ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಶೃತಿ ಹಾಸನ್ ಗೆ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.